ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತ ನಾಡಿದರು. ಚುನಾವಣೆಯಲ್ಲಿ ಸೊಲುತ್ತೇವೆ ಅಂತ ಯಾರು ನಿಂತುಕೊಳ್ಳೋದಿಲ್ಲ. ನಮಗೆ ಎಷ್ಟು ಮತಗಳು ಬೇಕೋ ಅಷ್ಟು ಬರುತ್ತೆ.
ನಮ್ಮ ಮೂವರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಗೆ ಚುನಾವಣೆಯಲ್ಲಿ ಅಭ್ಯರ್ಥಿ ಹಾಕುವ ಅಗತ್ಯವಿರಲಿಲ್ಲ. ಆದರೂ ಹಾಕಿದ್ದಾರೆ. ನಮ್ಮ ಅಭ್ಯರ್ಥಿಗೆ ನಿಷ್ಠೆಯಿಂದ ಮತಹಾಕಬೇಕು ಎಂದು ನಾವು ನಮ್ಮ ಸೂಚಿಸಿದ್ದೇವೆ. ನಮ್ಮ ಮೂರು ಅಭ್ಯರ್ಥಿಗಳು ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.