ಬೆಂಗಳೂರು:- ಖಾಸಗಿ ದೇವಾಲಯಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲು ಯತ್ನ ನಡೆಯುತ್ತಿದೆ ಎಂಬ ಆರೋಪಕ್ಕೆ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಾಹಿತಿ ಕೊರತೆಯಿದೆ. ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ರೀತಿಯ ನೋಟಿಸ್ ಜಾರಿಮಾಡಿಲ್ಲ. ಖಾಸಗಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿಸುವ ವಿಷಯ ಪ್ರಸ್ತಾಪಿಸಿಲ್ಲ ಎಂದು ಟ್ವೀಟ್ ಮೂಲಕ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದರು.
ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ರೀತಿಯ ನೋಟೀಸ್ ಆಗಲಿ ಯಾವುದೇ ಖಾಸಗಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರ್ಪಡಿಸುವ ವಿಷಯ ಬಂದಿರುವುದಿಲ್ಲ , ರಾಜಕೀಯವಾಗಿ ಆರೋಪ ಮಾಡಿ ಜನರನ್ನು ದಾರಿ ತಪ್ಪಿಸುವ ಕೆಲಸ ರಾಜ್ಯಾಧ್ಯಕ್ಷರು ಮಾಡುತ್ತಿದ್ದಾರೆ ಎಂದರು.
ಹಿಂದಿನ ಅವರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ಖಾಸಗಿ ದೇವಾಲಯಗಳನ್ನು ಮುಜರಾಯಿ ಇಲಾಖೆಗೆ ಒಳಪಡಿಸಿರುತ್ತಾರೆ. ಬಿಜೆಪಿ ಬೆಂಬಲಿತ ಕೆಲ ಹಿಂದೂ ಸಂಘಟನೆಗಳು ಈ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.