ದೆಹಲಿ: ಮೂರೂ ಸ್ವರೂಪದ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಹಿರಿಯ ವೇಗಿ ಭುವನೇಶ್ವರ್ ಕುಮಾರ್ ಅವರು ಮುಂದಿನ ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆಂದು ವರದಿಯಾಗಿದೆ.
ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯ ಬಯೋದಲ್ಲಿ ಭುವನೇಶ್ವರ್ ಕುಮಾರ್ ಅವರು, ಕ್ರಿಕೆಟರ್ ಎಂಬ ಪದವನ್ನು ತೆಗೆದಿದ್ದಾರೆ.
ಇದಕ್ಕೂ ಮುನ್ನ ಅವರು ‘ಇಂಡಿಯನ್ ಕ್ರಿಕೆಟರ್’ ಎಂದು ಬರೆದುಕೊಂಡಿದ್ದರು. ಆದರೆ, ಇದೀಗ “ಇಂಡಿಯನ್ ಇನ್ ಫ್ಯಾಮಿಲಿ ಫಸ್ಟ್, ಪೆಟ್ ಲವರ್, ಕ್ಯಾಸ್ಯೂಲ್ ಗೇಮರ್” ಎಂದು ಬದಲಿಸಿಕೊಂಡಿದ್ದಾರೆ. ಇದರರ್ಥ ಅವರು ಬಿಸಿಸಿಐ ವಿರುದ್ದ ಅಸಮಾಧಾನಗೊಂಡಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಅತಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ಬೈ ಹೇಳಲಿದ್ದಾರೆಂದು ಅರ್ಥೈಸಿಕೊಳ್ಳಲಾಗಿದೆ.
ಕಳೆದ ವರ್ಷ ಜನವರಿ 8 ರಂದು ಭುವನೇಶ್ವರ್ ಕುಮಾರ್ ಅವರು ದಕ್ಷಿಣ ಆಫ್ರಿಕಾ ವಿರುದ್ದ ಪರ್ಲ್ನಲ್ಲಿ ಕೊನೆಯ ಏಕದಿನ ಪಂದ್ಯ ಆಡಿದ್ದರು. ಆದರೆ, ಗಾಯದ ಸಮಸ್ಯೆ ಹಾಗೂ ಫಾರ್ಮ್ ಕಳೆದುಕೊಂಡಿರುವ ಕಾರಣ ಅವರು ಅಂದಿನಿಂದ ಇಲ್ಲಿಯವರೆಗೂ ಭಾರತ ತಂಡದ ಪರ ಯಾವುದೇ ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ.
ಭಾರತ ಹಾಗೂ ಐರ್ಲೆಂಡ್ ನಡುವಣ ಟಿ20 ಸರಣಿಯ ವೇಳೆ ಭುವನೇಶ್ವರ್ ಕುಮಾರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳುವ ಸಾಧ್ಯತೆ ಇದೆ ಎಂದು ದಿ ಕ್ರಿಕೆಟ್ಲಾಂಜ್ ವರದಿ ಮಾಡಿದೆ. ಇವರ ಜೊತೆಗೆ ಭಾರತ ಟೆಸ್ಟ್ ತಂಡದ ಸ್ಟಾರ್ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಕೂಡ ಸೀಮಿತ ಓವರ್ಗಳ ಕ್ರಿಕೆಟ್ಗೆ ವಿದಾಯ ಹೇಳಬಹುದೆಂದು ಅಂದಾಜಿಸಲಾಗಿದೆ