ಹಾಸನ: ರಜೆಯ ಮೇಲೆ ಊರಿಗೆ ತೆರಳಿದ್ದಂತ ಮಹಿಳಾ ಪಿಎಸ್‌ಐ ಬಾಡಿಗೆ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವಂತ ಘಟನೆ ಹಾಸನದ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಮನೆಯಲ್ಲಿದ್ದಂತ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವುದಾಗಿ ತಿಳಿದು ಬಂದಿದೆ.
ಹಾಸನ ಜಿಲ್ಲೆಯ ಅರಕಲಗೂಡಿನ ಕೋಣನೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಶೋಭಾ ಭರಮಕ್ಕನವರ್ ಕರ್ತವ್ಯ ನಿರ್ವಹಿಸುತ್ತಿದ್ದರು.
ಕೋಣನೂರಿನಲ್ಲಿಯೇ ಬಾಡಿಗೆ ಮನೆಯಲ್ಲಿ ವಾಸವಿದ್ದಂತ ಅವರು, ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಬಾಡಿಗೆ ಮನೆಯ ಕಿಟಕಿ ಒಡೆದಿರುವಂತ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.
ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದಾಗಿ ಪಿಎಸ್‌ಐ ಶೋಭಾ ಮನೆಯಲ್ಲಿದ್ದಂತ ಲ್ಯಾಪ್ ಟಾವ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪಿಠೋವಕರಣ ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿದ್ದಾವೆ.