ಬೆಂಗಳೂರು : ಕರ್ನಾಟಕದ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ಮುಂದೆ ಬಿಜೆಪಿಗೆ ಹಲವು ಬಾರಿ ಮುಜುಗರ ಉಂಟಾಗಿದೆ. ಇದರ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ನಾಡಿನ ಮತದಾರರಿಗೆ ತಮ್ಮದೇ ರೀತಿಯಲ್ಲಿ ಮಾಹಿತಿ ನೀಡಿದ್ದಾರೆ. ಅದಲ್ಲದೇ ನಾವು ಯಾರ ಜೊತೆಯೂ ಹೊಂದಾಣಿಕೆ ರಾಜಕೀಯ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ.
ತಮ್ಮ ಟ್ವೀಟ್ನಲ್ಲಿ ನಾಲ್ಕು ಅಂಶಗಳನ್ನು ಪ್ರಸ್ತಾಪಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ಎಲ್ಲ ಬಿಜೆಪಿ ಶಾಸಕರು ಸದನದಲ್ಲಿ ಸಮರ್ಥ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಯಾವ ರಾಜಕಾರಣಿ ಅಥವಾ ಮಂತ್ರಿಗಳ ಜೊತೆಯೂ ನಮ್ಮ “Adjustment” ರಾಜಕೀಯ ಇಲ್ಲ ಎಂದು ಬಿಜೆಪಿ ಕಾರ್ಯಕರ್ತರು ಹಾಗೂ ರಾಜ್ಯದ ಮತದಾರರಿಗೆ ತಿಳಿಸಿದ್ದಾರೆ.