ರಾಯಚೂರು :-ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) 4ನೇ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ. ಯಾದಗಿರಿ ಮೂಲದ ನಿಂಗಪ್ಪ (45) ಮೃತ ಕಾರ್ಮಿಕ. ಆರ್‌ಟಿಪಿಎಸ್ 4ನೇ ಘಟಕದ ಇಎಸ್‌ಪಿಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನಿಂಗಪ್ಪಗೆ ವಿದ್ಯುತ್ ತಗುಲಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿದ್ಯುತ್ ಶಾಕ್‌ನಿಂದ ಕಾರ್ಮಿಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆರ್‌ಟಿಪಿಎಸ್ ಘಟಕದ ಎದುರು ಕಾರ್ಮಿಕರು ಪ್ರತಿಭಟನೆ ನಡೆಸಿ, ಕಾರ್ಮಿಕರಿಗೆ ಸೂಕ್ತ ಭದ್ರತೆ ಜತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜತೆಗೆ ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು.