ಬೆಂಗಳೂರು: ಯಲಹಂಕ ನ್ಯೂಟೌನ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡ್ತಿದ್ದ ಒಡಿಶಾ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಕ್ಯಬನಾ ಬಾಗ್,ಸಂತೋಷ್ ರಾಣಾ,ಸುಧೀರ್ ರಾಣಾ ಬಂಧಿತ ಆರೋಪಿಗಳಾಗಿದ್ದು, ಓಡಿಶಾ ಗುಡ್ಡಗಾಡು ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿದ್ದ ಆರೋಪಿಗಳು ಗಾಂಜಾವನ್ನು ರೈಲಿನ ಮೂಲಕ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದ ಯಲಹಂಕ ನ್ಯೂಟೌನ್ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 21 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದು, ಈ ಘಟನೆ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.