ಬೆಂಗಳೂರು: ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಹೆಚ್.ಕೆ ಪಾಟೀಲ್ ಮಾತಾನಾಡಿದ್ದಾರೆ. ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನೂ ಯಶ್ ಅಭಿಮಾನಿಗಳು ಮೃತಪಟ್ಟಿರುವ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ನಟ ಯಶ್ ಸಹ ನನ್ನ ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳ ಮನೆಗೆ ಅವರಿಂದು ಭೇಟಿ ನೀಡಲಿದ್ದಾರೆ. ಎತ್ತರದಲ್ಲಿ ಫ್ಲೆಕ್ಸ್ ಹಾಕುವಾಗ ಭದ್ರತಾ ವೈಫಲ್ಯವಾಗುತ್ತಿದೆ. ಈ ರೀತಿ ಘಟನೆಗಳು ನಡೆಯದಂತೆ ಏನೆಲ್ಲಾ ಎಚ್ಚರಿಕೆ ವಹಿಸಬಹುದು ಎಂದು ಸಿಎಂ ಜೊತೆಗೆ ಚರ್ಚೆ ಮಾಡ್ತೀವಿ. ನಂತರ ಕ್ರಮವನ್ನು ಅನುಷ್ಠಾನಗೊಳಿಸುತ್ತೇವೆ ಎಂದು ವಿವರಿಸಿದ್ದಾರೆ.