ನಾನು ಯತ್ನಾಳ್ ಇಬ್ಬರೂ ಅಣ್ಣತಮ್ಮಂದಿರ ಹಾಗೆ ಇದ್ದೇವೆ: ಬಸವರಾಜ ಬೊಮ್ಮಾಯಿ

ಚಿಕ್ಕೋಡಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಪರೋಕ್ಷವಾಗಿ ಮಾತಿನ ಪೈಟ್ ನಡೆದಿದೆ. ಈ ವಿಚಾರವಾಗಿ ಚಿಕ್ಕೋಡಿಯ ಯಕ್ಸಂಬಾ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತಣಾಡಿದ ಬೊಮ್ಮಾಯಿ, ನಮ್ಮಿಬ್ಬರ ನಡುವೆ ಭಿನ್ನಾಬಿಪ್ರಾಯದ ಪ್ರಶ್ನೇಯೇ ಇಲ್ಲ. ನಾವು ಒಗ್ಗಟ್ಟಾಗಿ, ಒಂದಾಗಿ ಕಾಂಗ್ರೆಸ್ ಸೋಲಿಸುವ ಕುರಿತು ಮಾತನಾಡಿದ್ದೇವೆ ಹೊರತು ಮತ್ತೇನೂ ಅಲ್ಲ. ಬೆಳಗ್ಗೆಯಿಂದ ನಾವೆಲ್ಲರೂ ಒಟ್ಟಿಗೆ ಇದ್ದೇವೆ. ಅವರ ಕಾರಿನಲ್ಲೇ ಬಂದಿದ್ದೇನೆ. ಇಬ್ಬರೂ ಅಣ್ಣತಮ್ಮಂದಿರ ಹಾಗೆ ಇದ್ದೇವೆ. ಇಬ್ಬರದ್ದೂ ಮೂವತ್ತು ವರ್ಷಗಳ ದೋಸ್ತಿ. ರಾಜಕಾರಣ ಮೀರಿ ನಮ್ಮಿಬ್ಬರ ಸ್ನೇಹವಿದೆ. ಅವರದೇ ಆದ ಶೈಲಿಯಲ್ಲಿ ಆ ರೀತಿ ಹೇಳಿದ್ದಾರೆ. ಅವರು ಸಾರ್ವಜನಿಕವಾಗಿಯೇ ಹೇಳಿದ್ದಾರೆ. ನಾನು ಸಾರ್ವಜನಿಕವಾಗಿಯೇ ಸ್ಪಷ್ಟಿಕರಣ ಕೊಟ್ಟಿದ್ದೇನೆ. ಈಗಲೂ ಹೇಳುತ್ತೇನೆ ನಮ್ಮಿಬ್ಬರದ್ದು ಒಂದೇ ಡಿಎನ್ಎ, ಅದು ಬಿಜೆಪಿ ಡಿಎನ್ಎ ಎಂದರು

Loading

Leave a Reply

Your email address will not be published. Required fields are marked *