ಚಿತ್ರಗಳಲ್ಲಿ ಅಭಿನಯಿಸುವ ಕನಸ್ಸು ಕಂಡಿದ್ದ ಯುವನಟ ಹೃದಯಾಘಾತಕ್ಕೆ ಬಲಿ

ಮಂಡ್ಯ: ಹೃದಯಾಘಾತವಾಗಿ 24 ವರ್ಷ ಯುವ ನಟ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಮೃತನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಇವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು, ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ  ನೆಲೆಸಿದ್ದರು.
ಮೃತ ಪವನ್ ಹಿಂದಿ ಹಾಗೂ ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ಹೊರಹೊಮ್ಮುತ್ತಿದ್ದರು. ಅಲ್ಲದೆ ಬೆಳ್ಳಿ ತೆರೆ ಚಿತ್ರಗಳಲ್ಲಿ ಅಭಿನಯಿಸುವ ಕನಸು ಕೂಡ ಕಂಡಿದ್ದರು. ಆದರೆ ಪವನ್ ಗುರುವಾರ ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಹುಟ್ಟೂರಿನಲ್ಲಿ ಯುವನಟನ ಅಂತ್ಯಸಂಸ್ಕಾರ ನಡೆಯಲಿದೆ ಎಂಬುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

Loading

Leave a Reply

Your email address will not be published. Required fields are marked *