ಅವಿವ ಬಿಡಪ ಅವರ ಜೊತೆ ಸಪ್ತಪದಿ ತುಳಿದ ಯಂಗ್ ರೆಬೆಲ್

ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಯಂಗ್‌ ರೆಬೆಲ್ ಸ್ಟಾರ್‌ ಅಭಿಷೇಕ್ ಅಂಬರೀಶ್ ಅವರು ಅವಿವ ಬಿಡಪ ಅವರ ಜೊತೆ ಸಪ್ತಪದಿ ತುಳಿದಿದ್ದಾರೆ. ಅವಿವ ಬಿಡಪ ಅವರಿಗೆ ಮಾಂಗಲ್ಯ ಧಾರಣೆ ಮಾಡುವ ವಿಡಿಯೊ ಇದೀಗ ವೈರಲ್‌ ಆಗಿದೆ. ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್ ದೀಪಗಳಿಂದ ಇಡೀ ಮನೆ ಅಲಂಕಾರಗೊಂಡಿದೆ. ಕುಟುಂಬದವರು, ಆಪ್ತರು ಹಾಗೂ ಗಣ್ಯರ ಸಮ್ಮುಖದಲ್ಲಿ ಮದುವೆ ನೆರವೇರಿದೆ.

ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಾಲ್ಕು ವರ್ಷಗಳಿಂದ ಅಭಿಷೇಕ್ ಮತ್ತು ಅವಿವ ಬಿಡಪ ಪ್ರೀತಿಸುತ್ತಿದ್ದರು. ಅವಿವ ಬಿಡಪ ಫ್ಯಾಷನ್‌ ಲೋಕದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಸ್ವಿಮ್ ಸೂಟ್‌ ಬ್ರ್ಯಾಂಡ್‌ನ ಲಾಂಚ್ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *