ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆಯೋದಿಕ್ಕೆ ಅವಕಾಶ ಕೊಟ್ಟಂತಾಗಿದೆ. ಘಟನೆ ನಡೆದ ಕೂಡಲೇ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿಯವ್ರು ಮಾಡಲಿಲ್ಲ ಎಂದು ಬೊಮ್ಮಾಯಿ ಆರೋಪ ಮಾಡಿದರು.
ನಾವು ಬೆಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳಿಗೆ ಚಾಲನೆ ಕೊಟ್ಟು ಕೆಲಸಕ್ಕೆ ಹಚ್ಚುವ ಕೆಲಸ ಆಗಬೇಕು. ಇನ್ನೂ ಐದು ದಿನ ಮಳೆ ಆಗಲಿದೆ ಎಂಬ ಮುನ್ಸೂಚನೆ ಇದೆ. ವ್ಯವಸ್ಥಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು.