ಭಾರತ ಕ್ರಿಕೆಟ್ (Team India) ತಂಡದ ಮಾಜಿ ಆಲ್‌ರೌಂಡರ್ ಆಟಗಾರ ಯುವರಾಜ್ ಸಿಂಗ್ (Yuvraj Singh) ಅವರು ಶೀಘ್ರವೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಲು ಆರಂಭವಾಗಿದೆ. ಯುವರಾಜ್ ಇತ್ತೀಚೆಗೆ ಕೇಂದ್ರ ಸಾರಿಗೆ ಖಾತೆಯ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿದ್ದರು.ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.
ಪಂಜಾಬ್‌ನ (Punjab) ಗುರುದಾಸ್‌ಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ (BJP) ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಇಲ್ಲಿಯವರೆಗೆ ಯುವರಾಜ್ ಸಿಂಗ್ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ನಟ ಸನ್ನಿ ಡಿಯೋಲ್ ಹಾಲಿ ಗುರುದಾಸ್‌ಪುರ ಕ್ಷೇತ್ರದ ಸಂಸದರಾಗಿದ್ದಾರೆ.
ಪಂಜಾಬ್‌ನಲ್ಲಿ ಒಟ್ಟು 13 ಲೋಕಸಭಾ ಕ್ಷೇತ್ರಗಳಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ 8 , ಬಿಜೆಪಿ 2, ಶಿರೋಮಣಿ ಅಕಾಲಿ ದಳ 2, ಆಪ್ 1 ಸ್ಥಾನವನ್ನು ಗೆದ್ದುಕೊಂಡಿತ್ತು. ಪಂಜಾಬ್‌ನಲ್ಲಿ ಬಿಜೆಪಿ ದೊಡ್ಡ ಮಟ್ಟದ ಸಾಧನೆ ಮಾಡಿಲ್ಲ. ಈ ಕಾರಣಕ್ಕೆ ಬಿಜೆಪಿ ಯುವರಾಜ್ ಸಿಂಗ್ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ.