ನಿವೃತ್ತ ಐ.ಎ.ಎಸ್ ಅಧಿಕಾರಿ ಜಿಯಾವುಲ್ಲಾ ಅವರನ್ನು ಸಿಎಂ ಅಪರ ಕಾರ್ಯದರ್ಶಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಮಾನ್ಯ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮುಖ್ಯಮಂತ್ರಿಯವರ ಅವರ ಕಾರ್ಯದರ್ಶಿಯಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿ ಆದೇಶಿಸಿದೆ. ಎಸ್. ಜಿಯಾವುಲ್ಲಾ, ಇವರ ಗುತ್ತಿಗೆ ಆಧಾರದ ನೇಮಕಾತಿಗೆ ಸಂಬಂಧಿಸಿದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದ್ದಾರೆ.