ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ತನಿಖೆಗೆ ಸರ್ಕಾರ SITಗೆ ವಹಿಸಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ MLC ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ರಾಜ್ಯಪಾಲರಿಗೆ ದೂರು ನೀಡುತ್ತಿದ್ದೇವೆ. ಉಡುಪಿ, ಮಂಗಳೂರು ಭಾಗದ ಶಾಸಕರು ರಾಜಭವನಕ್ಕೆ ತೆರಳುತ್ತೇವೆ. ಪ್ರಕರಣವನ್ನು ಸರ್ಕಾರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸ್ತಿದೆ. ಆದರೆ ಅಧಿಕಾರಿಗಳು ಸರ್ಕಾರದ ಮಾತು ಕೇಳಿ ತನಿಖೆ ಮಾಡ್ತಾರೆ. ಹೀಗಾಗಿ ಪ್ರಕರಣವನ್ನು ಎಸ್ಐಟಿಗೆ ವಹಿಸಿ ಸೂಕ್ತ ತನಿಖೆ ನಡೆಸಲಿ ಎಂದರು.