ಜನ ಕಾಂಗ್ರೆಸ್​ ಪಕ್ಷವನ್ನೂ ಬ್ಯಾನ್​ ಮಾಡುತ್ತಾರೆ: ಸಿಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರವಾಗಿ ಬಿಜೆಪಿ ನಾಯಕ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುತ್ತೇವೆ ಅಂತ ಹೇಳಿದ್ದಾರೆ. ತಾಲಿಬಾನಿಗಳಿಗೂ ರಾಷ್ಟ್ರಭಕ್ತರಿಗೂ ವ್ಯತ್ಯಾಸ ಗೊತ್ತಿಲ್ಲದ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಇದು ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನ. ಭಯೋತ್ಪಾದಕರನ್ನು ದೇಶಭಕ್ತರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ನೋಡುವ ಕಾಂಗ್ರೆಸ್ ಪಕ್ಷದ ಮನಸ್ಥಿತಿಗೆ ನನ್ನ ಧಿಕ್ಕಾರ. ಇದು ಹನುಮನ ನಾಡು ಇಲ್ಲಿ ಹನುಮನನ್ನು ಆರಾಧಿಸುವಂತ ಬಜರಂಗದಳವನ್ನು ಬ್ಯಾನ್ ಮಾಡಲು ಹೊರಟಿದ್ದೀರಾ? ದೇಶಭಕ್ತಿ ಸಂಘಟನೆ ಬ್ಯಾನ್ ಮಾಡಲು ಹೊರಟಿದ್ದೀರಾ? ನಿಮ್ಮ ಆಟ ನಡೆಯುವುದಿಲ್ಲ ನಿಮ್ಮನ್ನು ಜನ ಬ್ಯಾನ್ ಮಾಡುತ್ತಾರೆ ಎಂದು ಹರಿಹಾಯ್ದಿದ್ದಾರೆ.

Loading

Leave a Reply

Your email address will not be published. Required fields are marked *